ಕುಂದಾಪುರ (ಅ.11) : ಇಂದಿನ ಸಮಾಜದಲ್ಲಿ ನಾವೆಲ್ಲರೂ ಕೆಲಸಕ್ಕಾಗಿ ಬದುಕೋ, ಬದುಕಿಗಾಗಿ ಕೆಲಸವೋ, ಯಾವುದನ್ನು ತಿಳಿಯದ ಸಂದಿಗ್ಧ ಪರಿಸ್ಥಿತಿಯ ಜಂಜಾಟದ ಬದುಕನ್ನು ನಡೆಸುತ್ತಿದ್ದೇವೆ. ಇದರ ನಡುವೆ ನಾವು ನಮ್ಮ ಬಗ್ಗೆ ಯೋಚಿಸುವುದೇ ಇಲ್ಲ ಹೀಗಾಗಿ ನಾವು ಸ್ವಲ್ಪ ನಿಧಾನಿಸಿ ಯೋಚಿಸಿದರೆ ನಮ್ಮ ಬದುಕಿನ ಆಯಾಮ ತಿಳಿಯಲು ಸಾಧ್ಯ ಎಂದು ಉಡುಪಿಯ ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯ, ಬರಹಗಾರರಾದ ಡಾ. ವಿರೂಪಾಕ್ಷ ದೇವರಮನೆಯವರು ಹೇಳಿದರು.

ಅವರು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ(ರಿ.) ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳು ಶಿಕ್ಷಕರಿಗಾಗಿ ಆಯೋಜಿಸಿದ ಶಿಕ್ಷಕರ ಸಬಲೀಕರಣ ʼವಿ ಕೇರ್ 2025ʼ ರ ಕಾರ್ಯಾಗಾರದಲ್ಲಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಅವರು ಸಂಪನ್ಮೂಲ ವ್ಯಕ್ತಿಯ ಪರಿಚಯದೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಎಲ್ಲ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ಕುಂದಾಪುರ ಪರಿಸರದ ವಿವಿಧ ಶಾಲೆಯ ಶಿಕ್ಷಕರು ಮತ್ತು ಪೋಷಕರು ಈ ಕಾರ್ಯಾಗಾರರಲ್ಲಿ ಭಾಗವಹಿಸಿದ್ದರು. ಶಿಕ್ಷಕಿ ದಿವ್ಯ ಎಚ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.











