ಕುಂದಾಪುರ( ಆ ,15): ಇಲ್ಲಿನ ಸುವರ್ಣ ಸಂಭ್ರಮದಲ್ಲಿರುವ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಯೋಗೀಶ್ ಶ್ಯಾನುಭೋಗ್ ಕಾವ್ರಾಡಿ, ಕಾರ್ಯದರ್ಶಿಯಾಗಿ ದೀಪಾ ಪೂಜಾರಿ, ಕೋಶಾಧಿಕಾರಿಯಾಗಿ ಸಚಿನ್ ಕುಮಾರ್, ಉಪಾಧ್ಯಕ್ಷರಾಗಿ ಜೋಸ್ಲಿನ್ ಆರ್. ಅಲ್ಮೇಡಾ, ಜೊತೆ ಕಾರ್ಯದರ್ಶಿಯಾಗಿ ವಿದ್ಯಾವತಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂಗೀತಾ, ಕ್ರೀಡಾ ಕಾರ್ಯದರ್ಶಿಯಾಗಿ ದರ್ಶನ್ ಹಾಗೂ ಕಾರ್ಯಕಾರಿ ಸಮಿತಿಗೆ ಐವತ್ತು ಪ್ರಾಕ್ತನ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭ ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಪ್ರಾಕ್ತನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











