ಕುಂದಾಪುರ (ಅಕ್ಟೋಬರ್ 11): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಡಾಕ್ಟರೇಟ್ ಪದವಿ ಪಡೆದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅವರಿಗೆ ‘ವಿಧಿಕ್ತ-2025’ ಅಂತರ್-ತರಗತಿ ಮೂಟ್ಕೋರ್ಟ್ ಸ್ಪರ್ಧೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ವಿದ್ಯಾರ್ಥಿಗಳು ನೈತಿಕತೆ ಮತ್ತು ಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ಎಂದು ಪ್ರೇರಣದಾಯಕ ಮಾತುಗಳನ್ನಾಡಿದರು. ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ ಸನ್ಮಾನ ಪತ್ರವನ್ನು ವಾಚಿಸಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅಭಿಯೋಜಕರಾ ಶ್ರೀ ರಾಜು ಪೂಜಾರಿ ಬನ್ನಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಿ. ಭಟ್, ಕಾರ್ಯಕ್ರಮದ ಸಂಯೋಜಕರಾದ ಶ್ರೀ ಸತೀಶ್ ಶೆಟ್ಟಿ ಹೆಸ್ಕುತ್ತೂರು, ಶ್ರೀಮತಿ ಜೋಸ್ಲಿನ್ ರೆನಿಟಾ ಡಿ. ಅಲ್ಮೇಡಾ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.










