ಕುಂದಾಪುರ (ಅ.21) : ಸಾಂಪ್ರದಾಯಿಕವಾಗಿ ನಡೆಯುವ ದೀಪಾವಳಿ ಹಬ್ಬ ಕೃಷಿ ಸಂಬAಧಿಯಾಗಿದ್ದು, ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ನಡೆಯುವ ಬಲೀಂದ್ರ ಪೂಜೆ, ಲಕ್ಷ್ಮಿ ಪೂಜೆ, ತುಳಸಿ ಪೂಜೆ, ಗೋಪೂಜೆ ಈ ಎಲ್ಲಾ ಆಚರಣೆಗಳು ವಿದ್ಯಾರ್ಥಿಗಳಿಗೆ ತಿಳಿದಿರಬೇಕೆಂದು ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಜಗದೀಶ್ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ದೀಪಾವಳಿ ಸಂಭ್ರಮ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಸಂಯೋಜಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ಬಹುಮಾನಿತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿನಿ ಶರಣ್ಯ ಶೆಟ್ಟಿ ನಿರೂಪಿಸಿದರು. ಈ ಸಂದರ್ಭ ಲಕ್ಷ್ಮಿ ಪೂಜೆ, ಗೋಪೂಜೆ, ಬಲೀಂದ್ರ ಪೂಜೆಯನ್ನು ಕಾಲೇಜಿನ ಆವರಣದಲ್ಲಿ ನೆರವೇರಿಸಲಾಯಿತು.










