ಕುಂದಾಪುರ (ಅ.24): ವಿದ್ಯಾರ್ಥಿಗಳು ತಮ್ಮ ಪದವಿಯ ಜೊತೆಗೆ ಮುಂದುವರಿದ ತಂತ್ರಜ್ಞಾನಗಳನ್ನೂ ಸಹ ಕಲಿತಾಗ ಮಾತ್ರ ಉನ್ನತ ಜ್ಞಾನದೊಂದಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಪಡೆಯಲು ಸಾಧ್ಯ ಎಂದು ಕುಂದಾಪುರದ ಫೋರ್ಥ್ ಫೋಕಸ್ ಸಂಸ್ಥೆಯ ಸ್ಥಾಪಕರಾದ ಶ್ರೀ ವಿ. ಗೌತಮ್ ನಾವಡ ಅವರು ಹೇಳಿದರು.

ಅವರು ದಿನಾಂಕ 24 ಅಕ್ಟೋಬರ್ 2025 ರಂದು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಗಣಕಶಾಸ್ತç ವಿಭಾಗ ಮತ್ತು ವರ್ಡ್ ಪ್ರೆಸ್ ಉಡುಪಿ ಕಮ್ಯೂನಿಟಿ ಇವರ ಸಹಯೋಗದಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವೆಬ್ ಡೆವಲಪ್ಮೆಂಟ್ ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್ ಎಂಬ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು.

ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಸ್ವಾಗತಿಸಿದರು. ಶೈಕ್ಷಣಿಕ ನಿಕಾಯಕರು ಹಾಗೂ ಕಾರ್ಯಕ್ರಮದ ಸಂಯೋಜಕರಾದ ಶ್ರೀ ಗಿರಿರಾಜ್ ಭಟ್ ಪ್ರಸ್ತಾವಿಕ ನುಡಿಗಳನ್ನಾಡಿ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ಈ ಸಂದರ್ಭ ಉಡುಪಿ ಸಬ್ವೆಬ್ ಸಂಸ್ಥಾಪಕ ಶಶಿಕಾಂತ್ ಶೆಟ್ಟಿ, ತೀರ್ಥಹಳ್ಳಿಯ ಯುಕ್ತಿ ಡಿಜಿಟಲ್ ಸಂಸ್ಥಾಪಕ ಮಂಜುನಾಥ್ ಎಮ್.ಎಮ್., ಕೋಟೇಶ್ವರ ಕೋಟಿಸಾಫ್ಟ್ ಸೊಲ್ಯೂಶನ್ ಮುಖ್ಯ ಕಾರ್ಯನಿರ್ವಾಹಕ ಓಂಕಾರ ಉಡುಪ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ರಿಷಿತಾ ಪ್ರಾರ್ಥಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ವಿಲ್ಮಾ ಶೆರಲ್ ವಂದಿಸಿ, ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರದಲ್ಲಿ ಭಾಗವಹಿಸಿ 70 ವಿದ್ಯಾರ್ಥಿಗಳು ವೆಬ್ಸೈಟ್ಗಳನ್ನು ನಿರ್ಮಿಸಿ ನೇರವಾಗಿ ಲೈವ್ ಮಾಡಿ ಪ್ರಾಯೋಗಿಕ ಕಲಿಕೆಗೆ ಸಾಕ್ಷಿಯಾದರು.











