ಕುಂದಾಪುರ (ಆ ,27): ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರು ಶೈಕ್ಷಣಿಕ ಕ್ಷೇತ್ರ ಮತ್ತು ಚಿತ್ರಕಲೆಯಲ್ಲಿ ಮಾಡಿದ ಸಾಧನೆಗಾಗಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿಕೆ ಆರ್ ಶಾಲೆಗಳ ಚಿತ್ರಕಲಾ ಶಿಕ್ಷಕರಾದ ರಮೇಶ್ ಹಾಂಡ ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಯನ್ನು ಅಕ್ಟೋಬರ್ 26ರಂದು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಿದರು.


ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ವಿಜಯಪುರದ ವನಶ್ರೀ ಸಂಸ್ಥಾನ ಮಠದ ಪೀಠಾಧಿಪತಿ ಡಾ| ಜಯಬಸವ ಮಹಾಸ್ವಾಮಿ, ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ ಎನ್ ಗಡದಿನ್ನಿ, ಕಾರ್ಯಧ್ಯಕ್ಷ ಡಾ|ಜಯಶೀಲ ಶೆಟ್ಟಿ , ಸಂಗನಗೌಡ ಪಾಟೀಲ ಕಲ್ಲೂರ ಮತ್ತಿತರರು ಉಪಸ್ಥಿತರಿದ್ದರು.












