ಕುಂದಾಪುರ (ಅ.31): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ಆಶ್ರಯದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛ ಸಂಗಮ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ‘ಸರ್ದಾರ್ ವಲ್ಲಭಭಾಯಿ ಪಟೇಲ್: ಭಾರತದ ರಾಷ್ಟ್ರ ಶಿಲ್ಪಿ’ ಎನ್ನುವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಮತ್ತು ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಮತ್ತು ಪೂಜಾ ಕುಂದರ್ ಉಪಸ್ಥಿತರಿದ್ದರು.











