ಕುಂದಾಪುರ : (ನ.1) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಅವರು ಕನ್ನಡ ನಾಡು ನುಡಿಯ ಬಗ್ಗೆ ಹೆಮ್ಮೆ ಇರಬೇಕು. ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಪಾತ್ರ ಪ್ರಮುಖವಾದದ್ದು. ಕನ್ನಡ ಭಾಷೆ ಹೃದಯದ ಧ್ವನಿಯಾಗಿದೆ ಎಂದು ಹೇಳಿದರು. ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ ಸಂಸ್ಥೆಯ ಕಲಾ ಶಿಕ್ಷಕರಾದ ಶ್ರೀಯುತ ರಮೇಶ್ ಹಾಂಡ ಅವರು ಧ್ವಜಾರೋಹಣ ಗೈದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಆಶುಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಈ ಸುಂದರ ಕಾರ್ಯಕ್ರಮವನ್ನು ಶಿಕ್ಷಕಿಯರಾದ ವಿದ್ಯಾ ಮತ್ತು ದೀಪಿಕಾರವರು ನಿರೂಪಿಸಿ ವಂದಿಸಿದರು.











