ಕುಂದಾಪುರ (ನ,.5) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ (ರಿ.) ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ.) ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆಸಿದ “ಶ್ರೀ ಸಿದ್ಧಿ ವಿನಾಯಕ ಟ್ರೋಫಿ” ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ – 2025 ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದಿರುತ್ತಾರೆ. ಪ್ರಾಥಮಿಕ ವಿಭಾಗದ ಮೂರನೇ ತರಗತಿಯ ಶ್ರೀನಿತ್ ಶೇಟ್ 3ನೇ ಸ್ಥಾನ ಮತ್ತು ಎರಡನೇ ತರಗತಿಯ ಆರ್ವಿ 4ನೇ ಸ್ಥಾನವನ್ನು ಪಡೆದಿರುತ್ತಾಳೆ.

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಶಿಕ್ಷಕರು ಅಭಿನಂದಿಸಿದರು.











