ಕುಂದಾಪುರ ( ನ ,10): ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ 6ನೇ ತರಗತಿಯ ಅದ್ಯಾನ್ ಜಾವೆದ್ ಸಾಗರದ ಕಿಂಗ್ಸ್ ಮೇಜ್ ಅಕಾಡೆಮಿ ಇವರು ಆಯೋಜಿಸಿದ ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ಅಂಡರ್ 12 ಕೆಟಗರಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ.

ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.











