ಗಂಗೊಳ್ಳಿ( ನ .12): ಇಲ್ಲಿನ ಶ್ರೀ ನಾರಾಯಣ ಗುರು ಜನಸೇವಾ ಬಳಗ(ರಿ.), ವತಿಯಿಂದ ಗಂಗೊಳ್ಳಿ ವಲಯದ ಅಂಗನವಾಡಿ ಮತ್ತು ಶಿಶುಮಂದಿರದ 18 ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗೌರವಿಸುವ ಅಭಿನಂದನಾ ಸಮಾರಂಭ ಮಾತೃ ದೇವೋಭವ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ನವೆಂಬರ್ 16ರ ಭಾನುವಾರ ಸಂಜೆ 4:00 ಗಂಟೆಗೆ ನಡೆಯಲಿದೆ.

ಗಂಗೊಳ್ಳಿಯ ಉದ್ಯಮಿ ವಿಠಲ ಬಿ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದು, ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಶ್ರೀ ಲಕ್ಷ್ಮಿನಾರಾಯಣ ಮಡಿವಾಳ ಅಧ್ಯಕ್ಷತೆ ವಹಿಸಲಿದ್ದಾರೆ ಗಂಗೊಳ್ಳಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ಅಧ್ಯಕ್ಷರಾದ ಭವಾನಿ ಶಂಕರ್ ಖಾರ್ವಿ, ಮತ್ಸೊದ್ಯಮಿ ರಾಘವೇಂದ್ರ ವಸಂತ ಮೇಸ್ತ, ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಶೇರುಗಾರ, ಗಂಗೊಳ್ಳಿ ಲಕ್ಷ್ಮಿ ಜ್ಯುವೆಲರ್ಸ್ ಮಾಲಿಕ ದಂಪತಿ ಕಾರ್ತಿಕ್ ಯು ಶೇಟ್ ಮತ್ತು ಸಲೋನಿ ಕಾರ್ತಿಕ್ ಶೇಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ಬಳಗದ ಅಧ್ಯಕ್ಷರಾದ ಜಿ ಗೋಪಾಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











