ಕುಂದಾಪುರ( ಡಿ.12): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ಶ್ರೀ ವೀರೇಂದ್ರ ವಿವರವಾದ ಮಾಹಿತಿ ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ವಿಭಾಗಗಳನ್ನು ವೀಕ್ಷಿಸಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಯಶಸ್ಸಿಗೆ ಶುಭಾಶಯ ತಿಳಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ, ಖಜಾಂಚಿಗಳಾದ ಶ್ರೀ ಶಿವರಾಂ ಶೆಟ್ಟಿ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಯಾದ ಶ್ರೀ ಯೋಗೀಶ್ ಶ್ಯಾನುಭೋಗ್ ಉಪಸ್ಥಿತರಿದ್ದರು.











