ಉಡುಪಿ(ಡಿ.29): ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ಅಂತರ್ ಜಿಲ್ಲಾ ಮಟ್ಟದ ಅತ್ಲೇಟಿಕ್ ಚಾಂಪಿಯನ್ಶಿಪ್ ನ 14 ವಯೋಮಿತಿಯ ಹುಡುಗರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ಕ್ರೀಡಾ ಪಟು ಹಾಗೂಓಕ್ ವುಡ್ ಇಂಡಿಯನ್ ಸ್ಕೂಲ್ ಕುಂದಾಪುರ ಇಲ್ಲಿನ ವಿದ್ಯಾರ್ಥಿ ಧನ್ವಿನ್ ಆರ್ ಪೂಜಾರಿ ಬೆಳ್ಳಿ ಪದಕ ಹಾಗೂ ಲಿಟಲ್ ರಾಕ್ ಇಂಡಿಯನ್ ಸ್ಕೂಲ್ ನ ಸಿದ್ಧಾರ್ಥ್ ಬಿ ಶೆಟ್ಟಿ ಕಂಚಿನ ಪದಕ ಪಡೆದಿದ್ದಾರೆ.

ಇವರಿಗೆ ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ಸ್ಥಾಪಕ ಹಾಗೂ ತರಬೇತುದರರಾದ ಶ್ರೀ ಪ್ರಶಾಂತ್ ಶೆಟ್ಟಿ ತರಬೇತಿ ನೀಡಿರುತ್ತಾರೆ.










