ಕುಂದಾಪುರ (ಜನವರಿ 27): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿ-ರೀಚ್ ಸಂಸ್ಥೆಯ ಮಾರ್ಗದರ್ಶನದಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ.ಎಸ್. ಫೌಂಡೇಶನ್ ಪರೀಕ್ಷೆಗೆ ಹಾಜರಾದ ಪ್ರಥಮ ವರ್ಷದ ವಾಣಿಜ್ಯ ವಿಭಾಗದ 21 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ 100 ಶೇಕಡಾ ಫಲಿತಾಂಶ ದೊರಕಿರುತ್ತದೆ. ಸಾಧಕ ವಿದ್ಯಾರ್ಥಿಗಳಿಗೆ ತರಬೇತಿ ಮಾರ್ಗದರ್ಶನ ನೀಡಿದ ವಿ-ರೀಚ್ ಸಂಸ್ಥೆ ಹಾಗೂ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.











