ಕುಂದಾಪುರ (ಫೆ – 15): ಬೀದರ್ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ(ರಿ). ಬೀದರ್ ಮತ್ತು ಮಂದಾರ ಕಲಾವಿದರ ವೇದಿಕೆ ಬೀದರ್ ಜಿಲ್ಲೆ ಇವರು ಕೊಡಮಾಡುವ ರಾಜ್ಯ ಮಟ್ಟದ ಕರ್ನಾಟಕ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಬಹುಮುಖ ಪ್ರತಿಭಾನ್ವಿತ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಆಯ್ಕೆಯಾಗಿದ್ದಾರೆ.
ಈ ವರೆಗೆ ರಾಜ್ಯ ಮಟ್ಟದ ವಿವಿಧ ದಿನಪತ್ರಿಕೆಗಳಲ್ಲಿ ಸುಮಾರು ಒಂದು ಸಾವಿರದ ಐನೂರಕ್ಕೂ ಹೆಚ್ಚಿನ ಲೇಖನಗಳು ಕಥೆ-ಕವನಗಳನ್ನು ಬರೆದಿರುವ, ಪ್ರೇರಣಾತ್ಮಕ ಅಂಕಣ ಬರಹಗಳುಳ್ಳ ಹೇಳದೆ ಹೋದ ಮಗಳಿಗೆ ಪುಸ್ತಕದ ಮೂಲಕ ಜನಪ್ರಿಯತೆ ಪಡೆದಿರುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ನರೇಂದ್ರ ಎಸ್ ಗಂಗೊಳ್ಳಿ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುಂದಿನ ತಿಂಗಳು ಬೀದರ್ ನಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಎಂ. ಜಿ.ದೇಶಪಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.