ಕುಂದಾಪುರ : ( ಜ. 30) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಚರಿಸಿದ 77 ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್ ರವರು ಧ್ವಜಾರೋಹಣಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ನಮ್ಮ ರಾಷ್ಟ್ರೀಯ ಮಹಾ ನಾಯಕರಿಂದ ಸ್ಪೂರ್ತಿ ಪಡೆದು ಬಲಿಷ್ಠ ಹಾಗೂ ಹೆಚ್ಚು ಸದೃಢವಾದ ಭಾರತವನ್ನು ನಿರ್ಮಿಸಲು ಕರೆ ನೀಡಿದರು. ಸಂಸ್ಥೆಯ ಉಪ ಪ್ರಾಂಶುಪಾಲೆ ಶುಭಾ ಕೆ ಎನ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಚರಣ್ ನಿರೂಪಿಸಿದರು.












