ಕುಂದಾಪುರ (ಫೆ.02): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮವನ್ನು ನಾಂದಿ ಫೌಂಡೇಶನ್ ಸಹಯೋಗದಲ್ಲಿ ಉದ್ಘಾಟಿಸಲಾಯಿತು. ಆರು ದಿನಗಳ ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಕೌಶಲ್ಯಗಳನ್ನು ಉತ್ತೇಜಿಸುವ ಹಾಗೂ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ತಯಾರಿಸಲು ಉದ್ದೇಶಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೋಟ ಕೋ-ಆಪರೇಟಿವ್ ಅಗ್ರಿಕಲ್ಚರಲ್ ಸೊಸೈಟಿ ಲಿಮಿಟೆಡ್, ಕೋಟ ಇದರ ಅಧ್ಯಕ್ಷರಾದ ಡಾ| ಕೃಷ್ಣ ಕಾಂಚನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಅಗತ್ಯವಾದ ಜಾಗೃತಿಯ ಬಗ್ಗೆ ಉಪನ್ಯಾಸ ನೀಡಿದರು.

ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ ಶ್ರೀ ತಿಮ್ಮಪ್ಪ ಡಿ.ಎಸ್. ಸ್ವಾಗತಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜಕರಾದ ಶ್ರೀಮತಿ ಪ್ರೀತಿ ಹೆಗ್ಡೆ ವಂದಿಸಿದರು. ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿ ಸುಹಾಸ್ ವಿ. ಮಲ್ಯ ಪ್ರಾರ್ಥಿಸಿ, ಕಾಲೇಜಿನ ಗ್ರಂಥಪಾಲಕರಾದ ಮಹೇಶ್ ನಾಯ್ಕ್ ನಿರೂಪಿಸಿದರು.











