ಕುಂದಾಪುರ (ಫೆ.7): ಇಲ್ಲಿನ ಯಡಾಡಿ-ಮತ್ಯಾಡಿಯಲ್ಲಿ ನಡೆದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಸ್ಮರಣ ಶಕ್ತಿಯ ತಂತ್ರಗಳು’ಎನ್ನುವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜೆ.ಸಿ.ಐ. ತರಬೇತುದಾರರು ಹಾಗೂ ಶಿಕ್ಷಕರಾದ ಶ್ರೀ ಅಶೋಕ್ ತೆಕ್ಕಟ್ಟೆ ಅವರು ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸ್ಮರಣ ಶಕ್ತಿಯ ವಿವಿಧ ತಂತ್ರಗಳನ್ನು ಮನವರಿಕೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿದ್ಕಲ್ಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಶ್ರೀ ವಿಘ್ನೇಶ್ವರ ಅಡಿಗ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪ್ರೇಮ ಜಪ್ತಿ, ಶ್ರೀಮತಿ ಸಾಕು ಜಪ್ತಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಡಾಡಿ-ಮತ್ಯಾಡಿಯ ಎಸ್.ಡಿ.ಎಂ.ಸಿ. ಸದಸ್ಯರುಗಳಾದ ಶ್ರೀಮತಿ ಸವಿತಾ, ಶ್ರೀಮತಿ ರಾಧಾ, ಶ್ರೀಮತಿ ಚೈತ್ರ ಹುಣ್ಸೆಮಕ್ಕಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂಸೇವಕಿ ಸಿಂಚನ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.











