ಕುಂದಾಪುರ ( ಆ,19 ): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಸಮ್ಮರ್ ಕ್ಯಾಂಪ್ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಅವರು ‘ಪ್ಯಾಟಿ ಮಕ್ಕಳ್ ಹಳ್ಳಿ ಟೂರ್’ ಇದೊಂದು ವಿಭಿನ್ನವಾದ ಕ್ಯಾಂಪ್, ಈ ಕ್ಯಾಂಪಿನಲ್ಲಿ ಕಲಿತ ಉತ್ತಮ ಅಂಶಗಳನ್ನು ಶಿಬಿರಾರ್ಥಿಗಳು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿಯಾಗಿರುವ ಶ್ರೀಯುತ ಸೀತಾರಾಮ ನಕ್ಕತ್ತಾಯರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.. ಸಂಸ್ಥೆಯ ಉಪ ಪ್ರಾಂಶುಪಾಲೆ ಶುಭಾ .ಕೆ ಎನ್ ರವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಶಿಬಿರದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ಶ್ರುತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳ ಪೋಷಕರು, ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.











