ಕುಂದಾಪುರ, (ಜೂ,16): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಪ್ರಾಥಮಿಕ ಹಾಗೂ ವಿ.ಕೆ.ಆರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು.ವಿದ್ಯಾರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆಮಾಡಿದರು. ಈ ಚುನಾವಣೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶವನ್ನು ಶಾಲೆ ಹೊಂದಿತ್ತು.


ವಿಕೆಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ನಾಯಕನಾಗಿ ಅನೀಶ್, ಉಪನಾಯಕನಾಗಿ ಸದ್ವಿನ್ ಶೆಟ್ಟಿ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ಭರತ್ಉಪನಾಯಕನಾಗಿ ಆರ್ಯನ್ ಕೆ ಪೂಜಾರಿ ಆಯ್ಕೆಯಾದರು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಸೀತಾರಾಮ ನಕ್ಕತ್ತಾಯ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉಪ ಪ್ರಾಂಶುಪಾಲೆ ಶ್ರೀಮತಿ ಶುಭಾ ಕೆ.ಎನ್ ಅವರ ಮಾರ್ಗದರ್ಶನದಲ್ಲಿ ಶಿಕ್ಷಕರು ಸಂಪೂರ್ಣ ವ್ಯವಸ್ಥೆಯನ್ನು ನಿರ್ವಹಿಸಿದರು.











