ಕುಂದಾಪುರ (ಜೂ,22): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ಸಭೆಜೂನ್ 22 ರಂದು ನಡೆಯಿತು.

ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಯೋಜನೆ ಹಾಗೂ ಯೋಚನೆಗಳನ್ನು ಮಂಡಿಸಿದರು.

ಸಹಾಯಕ ಮುಖ್ಯ ಶಿಕ್ಷಕಿ ಆರತಿ ಶೆಟ್ಟಿ ಶಾಲೆಯ ನೀತಿ ನಿಯಮಗಳ ಬಗ್ಗೆ ಮಾತನಾಡಿದರು. ಪ್ರಾಥಮಿಕ ವಿಭಾಗದ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು ಮತ್ತು ಶಿಕ್ಷಕೇತರರು ಉಪಸ್ಥಿತರಿದ್ದರು. ಶಿಕ್ಷಕಿ ಭಾರತಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.










