ಕುಂದಾಪುರ (ಜುಲೈ 18): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ಡಾ| ಬಿ. ಬಿ. ಹೆಗ್ಡೆಯವರ ಧರ್ಮಪತ್ನಿ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯದಲ್ಲಿ ಆಯೋಜಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಸಂಸ್ಥೆಯ ಏಳಿಗೆಗೆ ಕಾರಣರಾದ ಮಾತೃ ಹೃದಯಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಹಕಾರವನ್ನು ಸ್ಮರಿಸಿದರು.
ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸುರೇಖಾ ಆಚಾರ್ಯ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಪುಷ್ಪಾರ್ಚನೆ ಸಲ್ಲಿಸಿದರು.










