ಗಂಗೊಳ್ಳಿ(ಜು,24) : ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ವತಿಯಿಂದ ಇಲ್ಲಿನ ಮ್ಯಾಂಗನೀಸ್ ರಸ್ತೆಯ ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಮಕ್ಕಳಿಗೆ ಕಲಿಕೆಯ ಪರಿಕರಗಳ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಗೋಪಾಲ ಪೂಜಾರಿ, ಉಪಾಧ್ಯಕ್ಷೆ ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ಯ, ನಾಗಭೂಷಣ ಶೇಟ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರದ ಸಹಾಯಕಿ ಸೀಮಾ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಸಂಗೀತ ಶುಭ ಹಾರೈಸಿದರು.











