ಕುಂದಾಪುರ( ಜು ,24): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಶಾಲೆಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಾರ್ಕಳದಲ್ಲಿ ನಡೆದ ಕರ್ನಾಟಕ ಚೆಸ್ ಅಸೋಸಿಯೇಷನ್ (KCA) ವತಿಯಿಂದ ಆಯೋಜಿಸಲಾದ 12ನೇ ಅಂತರಜಿಲ್ಲಾ ರಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯ ಅಂಡರ್-9 ವಯೋಮಾನದ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ರಾಪಿಡ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಬ್ಲಿಟ್ಜ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ . ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.











