ಕುಂದಾಪುರ ( ಜು ,31): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳು ಸಿದ್ದಾಪುರದ ಜ್ಞಾನ ಸರಸ್ವತಿ ವಿದ್ಯಾಲಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕೃತಿ ಜಿ. ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅದ್ಯಾನ ಜಾವೇದ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅಫ್ಸಾನ್ ಜಾವೇದ್ ನಾಲ್ಕನೇ ಸ್ಥಾನ ಹಾಗೂ ಅರ್ಹಾನ್ ಜಾವೇದ್ ಐದನೇ ಸ್ಥಾನ ಪಡೆದು ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ-ಶಿಕ್ಷಕೇತರು ಅಭಿನಂದಿಸಿದದ್ದಾರೆ.










