ಕುಂದಾಪುರ(ಆ,12): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳು ಆಗಸ್ಟ್ 12 ರಂದು ಕುಂದಾಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಅಧಿಕಾರಿಗಳ ಕರ್ತವ್ಯ ಹಾಗೂ ಶಾಲಾ ವಾಹನದಲ್ಲಿ ಸಂಚಾರ ಮಾಡುವಾಗ ಅನುಸರಿಸಬೇಕಾದ ನಿಯಮ ಹಾಗೂ ಮೊಬೈಲ್ ಬಳಕೆ ನಿಷೇಧದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಅಧಿಕಾರಿಗಳು ಸರಳವಾಗಿ ವಿವರಿಸಿ ಮಕ್ಕಳಿಗೆ ಶುಭ ಹಾರೈಸಿದರು.










