ಕುಂದಾಪುರ (ಆ.10): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳು ಹೆಮ್ಮಾಡಿ ಗೋಡಂಬಿ ಕಾರ್ಖಾನೆಗೆ ಶೈಕ್ಷಣಿಕ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗೋಡಂಬಿಯ ಸಂಸ್ಕರಣೆ, ವಿಂಗಡಣೆ, ಪ್ಯಾಕಿಂಗ್ ಹಾಗೂ ಮಾರುಕಟ್ಟೆಗೆ ಸಾಗಿಸುವ ವಿವಿಧ ಹಂತಗಳ ಬಗ್ಗೆ ಮಾಹಿತಿ ಪಡೆದರು.

ಕಾರ್ಖಾನೆಯ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಗೋಡಂಬಿ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯನ್ನು ವಿವರಿಸಿದರು. ಪಠ್ಯಪುಸ್ತಕದಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ತಿಳಿದುಕೊಳ್ಳಲು ಈ ಭೇಟಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವಾಗಿತ್ತು. ಶೈಕ್ಷಣಿಕವಾಗಿ ಉಪಯುಕ್ತವಾಗಿದ್ದ ಈ ಭೇಟಿ ವಿದ್ಯಾರ್ಥಿಗಳಲ್ಲಿ ಕುತೂಹಲ ಮತ್ತು ಜ್ಞಾನವನ್ನು ಹೆಚ್ಚಿಸಿತು.










