ಕುಂದಾಪುರ( ಆ ,26): ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ಹೋಲಿ ರೋಸರಿ ಚರ್ಚ್ ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಸಂಹಿತ ತಂತ್ರಿ ಆಯಿಷ ತಾನಾಜ್ಜ್ ,ರಿಯಾ ಅರ್ ಪುತ್ರನ್ , ಜೆನಿಫರ್ ಇಂಡಿಯಾ, ಆರಾಧ್ಯ ಎಂ,ಲಿಶಾ ಡಯಾಸ್ ಹಾಗೂ ಪ್ರಕೃತಿ ಪ್ರಥಮ ಸ್ಥಾನವನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಹಾಗೂ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.










