ಕುಂದಾಪುರ( ಅ ,04): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ .ಎಂ. ಎಂ ಹಾಗೂ ವಿ. ಕೆ. ಆರ್ ಶಾಲೆಗಳಲ್ಲಿ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ವಿಜೃಂಭಣೆಯಿಂದ ನಡೆಯಿತು.

ಸಮಾರಂಭವು ಸಂಸ್ಥೆಯ ಸಂಗೀತ ಶಿಕ್ಷಕ ಪ್ರಕಾಶರವರ ದೇಶಭಕ್ತಿ ಗೀತೆಯೊಂದಿಗೆ ಪ್ರಾರಂಭವಾಯಿತು. ಶಿಕ್ಷಕಿ ಶಾರದಾ ಗಾಂಧೀಜಿಯವರ ಜೀವನ, ಸತ್ಯ ಮತ್ತು ಅಹಿಂಸೆಯ ಸಂದೇಶವನ್ನು ವಿವರಿಸಿದರು. ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮದ ಕೇಂದ್ರಬಿಂದುವಾಗಿತ್ತು. ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಂದನಾರ್ಪಣೆಯ ನಂತರ ಶಿಕ್ಷಕರು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು “ಸ್ವಚ್ಛತೆಯೇ ಸೇವೆ” ಎಂಬ ಸಂದೇಶ ಸಾರಿದರು. ಶಿಕ್ಷಕಿ ಅಂಜನಾ ದೇವಿ ಕಾರ್ಯಕ್ರಮ ನಿರೂಪಿಸಿದರು.










