ಕುಂದಾಪುರ(ಫೆ.19) ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಕುಂದಾಪುರ ಇದರ ಹವಾನಿಯಂತ್ರಿತ ನವೀಕೃತ ಶಾಖೆಯನ್ನು ಬೈಂದೂರಿನ ಶಾಸಕ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಗ್ರಾಹಕರ ವಿಶ್ವಾಸ ಗಳಿಸಿ ಯಶಸ್ಸಿನತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ಹೊಂದಿ ಸೊಸೈಟಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಅಧ್ಯಕ್ಷರಾದ ಕೆ.ಜೈರಾಜ್ ಬಿ.ರೈ ವಹಿಸಿದ್ದರು. ಉಡುಪಿ ಜಿಲ್ಲೆ ಸಹಕಾರ ಸಂಘಗಳ ಪ್ರಭಾರ ಉಪನಿಬಂಧಕರಾದ ಪ್ರವೀಣ್ ಬಿ.ನಾಯಕ್, ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಎಸ್.ರಾಜು ಪೂಜಾರಿ, ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ ಎಸ್.ವಿ, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾಭಾಸ್ಕರ ಮೆಂಡನ್, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಜಂಟಿ ಕಾರ್ಯದರ್ಶಿ ಸಂಪಿಗೇಡಿ ಸಂಜೀವ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ತಾಲೂಕು ಸಮಿತಿ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ನಿರ್ದೇಶಕರಾದ ಪಿ.ಬಿ ದಿವಾಕರ ರೈ, ರವೀಂದ್ರನಾಥ ಜಿ.ಹೆಗ್ಡೆ, ಪ್ರಭಾರ ಮಹಾಪ್ರಬಂಧಕರಾದ ಗಣೇಶ್ ಜಿ.ಕೆ , ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕುಂದಾಪುರ ಶಾಖಾ ಸಲಹಾ ಸಮಿತಿ ಅಧ್ಯಕ್ಷರಾದ ಬಿ. ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಉಪಾಧ್ಯಕ್ಷೆ ಲಕ್ಷ್ಮೀ ಜಯಪಾಲ ಶೆಟ್ಟಿಯವರ ಸಂದೇಶವನ್ನು ಅಧ್ಯಕ್ಷರು ಸಭೆಯಲ್ಲಿ ವಾಚಿಸಿದರು. ಕುಂದಾಪುರ ಶಾಖೆ ವ್ಯವಸ್ಥಾಪಕರಾದ ಧನಂಜಯ ಶೆಟ್ಟಿಗಾರ್ ವಂದಿಸಿದರು. ರಾಜಾರಾಮ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿದರು.