ಕುಂದಾಪುರ (ಫೆ:19): ಕುಂದಾಪುರ ಹಾಗೂ ಬೈಂದೂರು ತಾಲೂಕಿನ 2020-21 ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿ ವೇತನಕ್ಕೆ (State Scholarship Portal) ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
2019 -20 ಹಾಗೂ 2020- 21ನೇ ಸಾಲಿನ ಪರಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರ (ಪಿಯುಸಿ ಇಂದ ಪಿ.ಎಚ್ .ಡಿ- PUC to Ph.D. )ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ https://ssp.karnataka.gov.in ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 15 – 02 – 2021ರಿಂದ 15 – 03 – 2021 ವರೆಗೆ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ
https://ssp.karnataka.gov.in ವೆಬ್ ಸೈಟನ್ನು ಸಂಪರ್ಕಿಸಲು ಸೂಚಿಸಲಾಗಿದೆ.










