ಉಡುಪಿ (ಫೆ.21): ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕೇಂದ್ರಗಳಲ್ಲೊಂದಾದ,ಮೊಗವೀರ ಸಮುದಾಯದ ಆರಾಧ್ಯ ದೇವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ನೂತನ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಫೆಬ್ರವರಿ 21 ರಂದು ಬೆಳಗ್ಗೆ 8.30ಕ್ಕೆ ನಡೆಯಿತು. ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಆಶೀರ್ವಚನ ನೀಡಿದರು.
ಮೊಗವೀರ ಸಮುದಾಯ ತಮ್ಮ ಕುಲಕಸುಬನ್ನು ಒಗ್ಗಟ್ಟಿನಿಂದಲೆ ನಿರ್ವಹಿಸುತ್ತಾ ಬಂದವರು ದೇವಾಲಯದ ಜೀರ್ಣೋದ್ಧಾರ ಕಾರ್ಯವು ಸಹ ಒಗ್ಗಟ್ಟಿನಿಂದಲೆ ನಿರ್ವಹಿಸುತ್ತಾರೆ ಎನ್ನುವ ಸಂಪೂರ್ಣ ವಿಶ್ವಾಸ ಇದೆ. ಶ್ರೀ ಮಹಾಲಕ್ಷ್ಮಿ ದೇವಿಯ ಪ್ರಕರ ಶಕ್ತಿ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಅವರು ಹೇಳಿದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ನಾಡೋಜಾ ಡಾ. ಜಿ. ಶಂಕರ್ ಮಾತನಾಡುತ್ತಾ ಶ್ರೀ ಕ್ಷೇತ್ರ ಧಾರ್ಮಿಕ ಕೇಂದ್ರವಾಗಿ ಗುರುತಿಸಿ ಕೊಳ್ಳುವುದರ ಜೊತೆಗೆ ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಗುರುತಿಸಿಕೊಳ್ಳಲಿದೆ ಎಂದು ಹೇಳಿದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ರಾಜ್ಯ ಗಂಗಾಮತಸ್ಥ ಸಂಘದ ಅಧ್ಯಕ್ಷ ಬಿ.ಮೌಲಾಲಿ, ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳು, ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ವಾಸ್ತು ತಜ್ಞ ಗುಂಡಿಬೈಲು ಸುಬ್ರಹ್ಮಣ್ಯ ಭಟ್, ಹಿರಿಯ ಅರ್ಚಕ ವೇದಮೂರ್ತಿ ವೆಂಕಟ ನರಸಿಂಹ ಉಪಾಧ್ಯಾಯ, ಶ್ರೀ ಮಹಾಕಾಳಿ ಶ್ರೀ ಜನಾರ್ಧನ ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರಾದ ವಿಜಯ ಬಲ್ಲಾಳ್ ದ.ಕ ಮೊಗವೀರ ಮಹಾಜನ ಸಂಘ (ರಿ) ಅಧ್ಯಕ್ಷ ಜಯ. ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್ ಉಪಸ್ಥಿತರಿದ್ದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷರ ಗುಂಡು. ಬಿ ಅಮೀನ್ ಸ್ವಾಗತಿಸಿದರು. ಚಂದ್ರೇಶ್ ಪಿತ್ರೋಡಿ ಕಾರ್ಯಕ್ರಮ ನಿರೂಪಿಸಿದರು.