ಉಡುಪಿ (ಫೆ.22) : ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲ ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಮೊಗವೀರ ಸಮುದಾಯದ ಆರಾಧ್ಯ ದೇವತೆ ಶ್ರೀ ಮಹಾಲಕ್ಷ್ಮಿ ದೇವಿ ಸರ್ವರಿಗೂ ಉಂಟುಮಾಡಲಿ, ಮುಂದಿನ ದಿನಗಳಲ್ಲಿ ಈ ದೇಗುಲವು ಹಿಂದೂ ಸಮಾಜದ ಪ್ರಮುಖ ಶ್ರದ್ಧಾ ಕೇಂದ್ರವಾಗಿ ರೂಪುಗೊಳ್ಳಲಿ ಎಂದು ಸಂಸದ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ದೇವಸ್ಥಾನದ ಪುನರ್ನಿರ್ಮಾಣ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರದಿಂದ ದೇವಾಲಯದ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಅನುದಾನವನ್ನು ಒದಗಿಸಿಕೊಡಲು ಬದ್ಧನಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ನಾಡೋಜ ಡಾ.ಜಿ. ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೇವಾಲಯದ ಸಮಗ್ರ ಅಭಿವೃದ್ಧಿಗೆ ಸರಕಾರ ಅನುದಾನ ದೊರಕಿಸಿಕೊಡಬೇಕು ಜೊತೆಗೆ ಮೊಗವೀರ ಸಮುದಾಯವನ್ನು ಎಸ್. ಟಿ. ವರ್ಗಕ್ಕೆ ಸೇರಿಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಲಾಲಾಜಿ .ಆರ್. ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ಬಾರ್ಕೂರು- ಬೆಣ್ಣೆಕುದ್ರು ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ಆನಂದ್.ಸಿ.ಕುಂದರ್, ರಾಜ್ಯ ಗಂಗಾಮತಸ್ಥ ಸಂಘದ ಅಧ್ಯಕ್ಷ ಬಿ. ಮೌಲಾಲಿ ,ಕೆಎಫ್ ಡಿಸಿ ಅಧ್ಯಕ್ಷ ನಿತಿನ್ ಕುಮಾರ್ ಬಂಗೇರ, ಹೆರಿಯಪ್ಪ ಕೋಟ್ಯಾನ್, ಕೃಷ್ಣ ಸುವರ್ಣ, ಚೇತನ್. ಜಿ, ಸದಾನಂದ ಕೋಟ್ಯಾನ್, ಕೆ .ಕೆ. ಕಾಂಚನ್, ಶಿವರಾಮ ಕೋಟ, ಗುಂಡು. ಬಿ .ಅಮೀನ್, ವಾಸುದೇವ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಸ್ವಾಗತಿಸಿದರು. ಕಾರ್ಯದರ್ಶಿ ಸುಧಾಕರ್ ಕುಂದರ್ ವಂದಿಸಿದರು. ಚಂದ್ರೇಶ ಪಿತ್ರೋಡಿ ಕಾರ್ಯಕ್ರಮ ನಿರೂಪಿಸಿದರು.