ಗಂಗೊಳ್ಳಿ (ಫೆ.22): ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್(ನಿ) ಇದರ ಅಮೃತ ಮಹೋತ್ಸವ ಇದೇ ಫೆಬ್ರವರಿ 27 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಲಿದೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಡಾ .ಎಂ.ಎನ್. ರಾಜೇಂದ್ರಕುಮಾರ್ ಅಮೃತ ಮಹೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸಾಧಕರಿಗೆ ಸನ್ಮಾನಿಸಲಿದ್ದು, ಬೈಂದೂರಿನ ಶಾಸಕರಾದ ಶ್ರೀ ಬಿ.ಎಂ ಸುಕುಮಾರ್ ಶೆಟ್ಟಿ ಅಮೃತ ಮಹೋತ್ಸವದ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದು, ಮಾಜಿ ಶಾಸಕ ಶ್ರೀ ಕೆ. ಗೋಪಾಲ ಪೂಜಾರಿ ಅಮೃತ ಮಹೋತ್ಸವದ ನಾಮಫಲಕ ಅನಾವರಣ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಶ್ರೀ ಆನಂದ ಬಿಲ್ಲವ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಆಕಾಶವಾಣಿ ಕಲಾವಿದ ಶ್ರೀ ಗಣೇಶ್ ಗಂಗೊಳ್ಳಿ ತಂಡದವರಿಂದ ಸುಗಮ ಸಂಗೀತ, ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಹಾಗೂ ಮಧ್ಯಾಹ್ನ 3:00 ಗಂಟೆಗೆ ಬಡಗುತಿಟ್ಟಿನ ಪ್ರಸಿದ್ಧ ಭಾಗವತರಾದ ರಾಘವೇಂದ್ರ ಆಚಾರ್ಯ ಜನ್ಸಾಲೆ ಯವರ ಸಾರಥ್ಯದಲ್ಲಿ ಕಂಸ ದಿಗ್ವಿಜಯ – ಕಂಸವಧೆ ಯಕ್ಷಗಾನ ಬಯಲಾಟ ನಡೆಯಲಿದೆ.