ಕುಂದಾಪುರ, ಫೆಬ್ರವರಿ 24: ಕ್ರೀಡೆಯಿಂದ ಅದೆಷ್ಟೋ ಯುವಜನತೆ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯನ್ನು ಮೆರೆಯುವುದರ ಜೊತೆಗೆ ತಮ್ಮ ವ್ಯಕ್ತಿತ್ವ ಮತ್ತು ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಲೆಕ್ಕಪರಿಶೋಧಕರು ಹಾಗೂ ತರಿಗೆ ಸಲಹೆಗಾರರಾದ ಶ್ರೀ ಗಣೇಶ್ ಶೆಟ್ಟಿ ಮೊಳಹಳ್ಳಿ ಹೇಳಿದರು. ಅವರು ಮಂಗಳೂರು ವಿ.ವಿ.ಯ ದೈಹಿಕ ಶಿಕ್ಷಣ ವಿಭಾಗ ಹಾಗೂ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕುಂದಾಪುರ ವಲಯ ಅಂತರ್ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಇದರ ಕಾರ್ಯದರ್ಶಿಗಳಾದ ಶ್ರೀ ಸೀತರಾಮ ನಕ್ಕತಾಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸ.ಪ್ರ.ದ.ಕಾಲೇಜು ಹೆಬ್ರಿಯ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಅರುಣ್ ಕುಮಾರ್ ಶೆಟ್ಟಿ, ಸ.ಪ್ರ.ದ. ಕಾಲೇಜು ಕೋಟೇಶ್ವರ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಮೇಶ್. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ಕ್ರೀಡಾ ಸಂಘದ ಕಾರ್ಯದರ್ಶಿ ವಿದ್ಯಾರ್ಥಿ ಲಕ್ಷ್ಮೀಶ ಮಂಜ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರಾಕ್ತನ ವಿದ್ಯಾರ್ಥಿ ವೀರಯೋಧ ಪ್ರಶಾಂತ್ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೆ.ಉಮೇಶ್ ಶೆಟ್ಟಿ ಪ್ರಸ್ತಾವಿಸಿದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಉಪನ್ಯಾಸಕ ಶಿವರಾಜ್ ಸಿ. ನಾವುಂದ ಕಾರ್ಯಕ್ರಮ ನಿರೂಪಿಸಿದರು.