ಮಧುವನ (ಫೆ-24): ಇ ಸಿ ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನ 2020-21ರ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ದಿನಾಂಕ 19-02-2021ರಂದು ನಡೆಯಿತು.ಲಕ್ಷ್ಮಿಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಪಡುಕೆರೆ ಕೋಟ ಇದರ ಪ್ರಾಂಶುಪಾಲರಾದ ಪ್ರೋ.ನಿತ್ಯಾನಂದ ಗಾಂವರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ವಿವರಿಸುವುದರ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಯುವ ಪೀಳಿಗೆಯ ಕರ್ತವ್ಯದ ಬಗ್ಗೆ ಅವರು ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ಅಕ್ಷತಾ ಗಿರೀಶ್ ಐತಾಳ್, ಸಹಪಾಲುದಾರರು ಉಡುಪಿ ಟೈಮ್ಸ್ ನ್ಯೂಸ್ ಮಾತನಾಡಿ ಇಂದಿನ ಯುವಪೀಳಿಗೆ ಯಾವುದೇ ಋಣಾತ್ಮಕ ವಿಚಾರಗಳಿಗೆ ಕಿವಿಗೊಡದೆ ಗುರಿ ಸಾಧಿಸುವ ಕಡೆ ಗಮನಹರಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಆಕಾಶ್ ಸವಳ ಸಂಗ್ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಏವಿಯೇಷನ್ ವಿಭಾಗದ ಮುಖ್ಯಸ್ಥರಾದ ಶ್ರೀ ಮಿರ್ ತಾಜ್ ದಾರ್ ಹುಸೇನ್, ಉಪಪ್ರಾಂಶುಪಾಲರಾದ ಶ್ರೀಮತಿ ಚಂದ್ರಕಲಾ ಎಸ್. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀ ಅಶೋಕ್ ಜೋಗಿ, ಸಹಯೋಜನಾಧಿಕಾರಿಗಳಾದ ಕುಮಾರಿ ನಿಧಿ ಹಾಗೂ ಕುಮಾರಿ ಸಮಿತಾ, ಎನ್ ಎಸ್ ಎಸ್ ಸ್ವಯಂಸೇವಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶ್ರೀ ಅಶೋಕ್ ಜೋಗಿ ಸ್ವಾಗತಿಸಿ, ಕುಮಾರಿ ಸಮಿತಾ ವಂದಿಸಿದರು. ಕುಮಾರಿ ನಿಧಿ ಕಾರ್ಯ ಕ್ರಮವನ್ನು ನಿರೂಪಿಸಿದರು.










