ಗಂಗೊಳ್ಳಿ (ಫೆ. 22) : ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರು ಪ್ರದೇಶಗಳಲ್ಲೊಂದಾದ ಗಂಗೊಳ್ಳಿ ಯನ್ನು ಸಮಗ್ರ ಅಭಿವೃದ್ಧಿಪಡಿಸುವ ಚಿಂತನೆ ನಡೆಸಿದ್ದು ಈಗಾಗಲೇ ಮುಖ್ಯ ರಸ್ತೆ ಸೇರಿದಂತೆ ಅನೇಕ ರಸ್ತೆಗಳಿಗೆ ಕಾಂಕ್ರೀಟಿಕರಣ ಗೊಳಿಸಲಾಗಿದೆ. ಇನ್ನು ಕೆಲವು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಮಲ್ಯರಬೆಟ್ಟು ದೇವಸ್ಥಾನದ ರಸ್ತೆಗೆ ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಹೇಳಿದರು.
ಅವರು ಫೆಬ್ರವರಿ 21 ರಂದು ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು 14 ಲಕ್ಷ ರೂ. ವೆಚ್ಚದ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗೇಶ್ವರದೇವಸ್ಥಾನದ ರಸ್ತೆ ಕಾಮಗಾರಿಗೆ ದೇವಸ್ಥಾನದ ಬಳಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಗಂಗೊಳ್ಳಿ ಗ್ರಾ. ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ. ಸಿ .ಪೂಜಾರಿ, ಪಂಚಾಯತ್ ಸದಸ್ಯರಾದ ಶ್ರೀನಿವಾಸ ಖಾರ್ವಿ, ಜಯಂತಿ ಖಾರ್ವಿ, ಪ್ರಶಾಂತ ಖಾರ್ವಿ, ಶಾಂತಿ ಖಾರ್ವಿ, ಲಲಿತಾ ಖಾರ್ವಿ, ಗಂಗೊಳ್ಳಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಉಪಾಧ್ಯಕ್ಷ ಸೂರಜ್ ಖಾರ್ವಿ, ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ಅಧ್ಯಕ್ಷ ರಾಮಪ್ಪ ಖಾರ್ವಿ, ಉಪಾಧ್ಯಕ್ಷ ಪಾಂಡು ಖಾರ್ವಿ, ಮಡಿಕಲ್ ಜನಾರ್ದನ ಖಾರ್ವಿ, ಶಿವಪ್ಪ ಖಾರ್ವಿ, ಮುಂತಾದವರು ಉಪಸ್ಥಿತರಿದ್ದರು.