ಕೊಲ್ಲೂರು (ಫೆ. 26): ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾದ ಸಪ್ತಪದಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಯೋಜನೆಯಡಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಫೆ.25ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಧಾರ್ಮಿಕ ದತ್ತಿ ಇಲಾಖೆ ಹಾಗೂ ಕೊಲ್ಲೂರು – ಶ್ರೀ ಮೂಕಾಂಬಿಕಾ ದೇಗುಲದ ಸಹಯೋಗದೊಡನೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮಾರ್ಗದರ್ಶನದಲ್ಲಿ 3 ಜೋಡಿ ಹಸೆಮಣೆ ಏರಿದರು.
ದೇವಸ್ಥಾನದ ಅರ್ಚಕ ಶ್ರೀಧರ ಅಡಿಗ ಹಾಗೂ ಪುರೋಹಿತರ ಸಮ್ಮುಖದಲ್ಲಿ ಕಾರ್ಯಕ್ರಮವು ನಡೆಯಿತು. ದೇವಸ್ಥಾನದ ಕಾರ್ಯ ನಿರ್ವಹಣಾ ಅಧಿಕಾರಿ ಮಹೇಶ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಡಾ.ಅತುಲ್ ಕುಮಾರ್ ಶೆಟ್ಟಿ , ಗೋಪಾಲಕೃಷ್ಣ ನಾಡ, ಸಂಧ್ಯಾ ರಮೇಶ, ರತ್ನಾ ಕುಂದರ್, ಶೇಖರ ಪೂಜಾರಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಶಿವರಾಮ ಕೃಷ್ಣ ಭಟ್, ಉಪಾಧ್ಯಕ್ಷ ಹರೀಶ ಶೆಟ್ಟಿ ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ಅಧೀಕ್ಷಕ ರಾಮಕೃಷ್ಣ ಅಡಿಗ, ಧಾರ್ಮಿಕ ಪರಿಷತ್ ಸದಸ್ಯರು, ವಧೂ-ವರರ ಕುಟುಂಬಸ್ಥರು, ದೇಗುಲದ ಸಿಬ್ಬಂದಿ, ಉಪಸ್ಥಿತರಿದ್ದರು.