ಕುಂದಾಪುರ (ಫೆ.25): ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಅನೇಕ ಅವಕಾಶಗಳಿದ್ದು ವಿದ್ಯಾರ್ಥಿಗಳು ತಮಗೆ ಲಭ್ಯವಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಹೇಳಿದರು.
ಅವರು ಕಾಲೇಜಿನ ಗಣಕವಿಜ್ಞಾನ ವಿಭಾಗದಿಂದ ಏರ್ಪಡಿಸಲಾದ “Tech-Manthan”ಎಂಬ ತಾಂತ್ರಿಕ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶೈಲೇಶ್ ಬಿ. ಸಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಬಿಸಿಎ ವಿದ್ಯಾರ್ಥಿ ನಿಶಾಂತ್ ಕಾರ್ಯಕ್ರಮದ ನಿಯಮಾವಳಿಗಳನ್ನು ವಿವರಿಸಿದರು. ಲಾವಣ್ಯ, ತೃತೀಯ ಬಿಸಿಎ ಸ್ವಾಗತಿಸಿ, ತನುಜ, ಅಂತಿಮ ಬಿಸಿಎ ಧನ್ಯವಾದ ಸಮರ್ಪಿಸಿದರು. ಪೂರ್ಣಿಮ, ಅಂತಿಮ ಬಿ.ಸಿ.ಎ ಕಾರ್ಯಕ್ರಮವನ್ನು ನಿರೂಪಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಲಾಯಿತು.