ವಂಡ್ಸೆ (ಮಾ.1) ಹಟ್ಟಿಯಂಗಡಿ ಕನ್ಯಾನ ಭಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಬೈಂದೂರಿನ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಯವರು ಶಂಕು ಸ್ಥಾಪನೆ ನೆರವೇರಿಸಿದರು.. ಇಪ್ಪತ್ತು ಲಕ್ಷ ರೂಪಾಯಿ ಮೌಲ್ಯದ ಕಾಮಗಾರಿ ಇದಾಗಿದ್ದು ಶೀಘ್ರವಾಗಿ ನಿರ್ಮಾಣ ಕಾರ್ಯ ಆಗಲಿದೆ ಎಂದು ಅವರು ಹೇಳಿದರು.
ಈ ಸಂಧರ್ಭದಲ್ಲಿ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ , ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಮೃತಾ ಶೆಟ್ಟಿ , ಉಪಾಧ್ಯಕ್ಷರಾದ ಪ್ರತಾಪ ಶೆಟ್ಟಿ ಹಾಗೂ ಪಕ್ಷದ ಪ್ರಮುಖರಾದ ಗಣೇಶ ಪೂಜಾರಿ,ರಾಜೀವ ಶೆಟ್ಟಿ ,ಚಂದ್ರ ಮೊಗವೀರ,ರಾಜೇಶ ಮೊಗವೀರ ,ಪ್ರಭಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.