ಕುಂದಾಪುರ (ಮಾ. 3 ): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಘಟಕ, ರೋಟರಿ ದಕ್ಷಿಣ ಹಾಗೂ ಯುವ ಸ್ಪಂದನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ, ಮಾನವ ಹಕ್ಕುಗಳು ಮತ್ತು ರಸ್ತೆ ಸುರಕ್ಷತೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕೋಟ ಪೊಲೀಸ್ ಠಾಣೆಯ ಎ.ಎಸ್.ಐ ಮುಕ್ತಾ ಬಾಯಿ ಹಾಗೂ ಕುಂದಾಪುರದ ನ್ಯಾಯವಾದಿ ರಾಘವೇಂದ್ರ ಚರಣ್ ನಾವಡ ವಿವಿಧ ಕಾಯಿದೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕುಂದಾಪುರ ಸೌತ್ ರೋಟರಿ ಉಪಾಧ್ಯಕ್ಷ ಕೆ.ಪಿ. ಭಟ್, ಯುವ ಪ್ರವರ್ತಕ ನರಸಿಂಹ ಗಾಣಿಗ, ಕಾಲೇಜನ ಮಾನವ ಹಕ್ಕುಗಳ ಘಟಕದ ಸಂಯೋಜಕರಾದ ಅವಿತಾ ಕೊರೆಯಾ, ಹಾಗೂ ಡಾ| ದೀಪಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಿತಾ ಸ್ವಾಗತಿಸಿದರು, ಶ್ವೇತಾ ವಂದಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು.