ಉಡುಪಿ(ಮಾ.5): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ, ರೋಟರಿ ಕ್ಲಬ್ ಶಂಕರಪುರ ಮತ್ತು ಸದ್ಗುರು ಸೌಹಾರ್ದ ಸಹಕಾರಿ ಲಿಮಿಟೆಡ್, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ “ಜನೌಷಧಿ ಸಪ್ತಾಹ ದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಗಾರವನ್ನು ಮಾರ್ಚ್3 ರಂದು ಕಾಲೇಜಿನ ಸಿಬ್ಬಂದಿಗಳಿಗೆ ಮತ್ತು ವಿಧ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.
ಈ ಕಾರ್ಯಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಉದ್ಘಾಟಿಸಿದರು.
ಉಡುಪಿ ಉದ್ಯಾವರ ಎಸ್.ಡಿ.ಎಮ್. ಕಾಲೇಜಿನ ಆಯುರ್ವೇದ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾದ ಡಾ. ಲಿಖಿತಾ ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಆಯುರ್ವೇದ ಚಿಕಿತ್ಸೆ ಮತ್ತು ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಶಂಕರಪುರ ರೋಟರಿ ಕ್ಲಬ್ ಘಟಕದ ರೋ. ನವೀನ್ ಅಮೀನ್, ರೋ. ಸುರೇಶ್ ವಿ ಬೀಡು. ಅಧ್ಯಕ್ಷರು ಶ್ರೀ ವಿಕ್ಟರ್ ಮಾರ್ಟಿಸ್, ಕಾರ್ಯದರ್ಶಿ ಶ್ರೀ ಜೆರೋಮ್ ರೋಡ್ರಿಗ್ರಸ್ ,ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸಹನಾ ಕಾರ್ಯಕ್ರಮ ನಿರೂಪಿಸಿದರು.