ಕುಂದಾಪುರ (ಮಾ. 9) : ವಿಧ್ಯಾರ್ಥಿಗಳು ಸಮಾಜದ ಆಗು-ಹೋಗುಗಳ ಕುರಿತು ಸೂಕ್ಷ್ಮವಾಗಿ ಗಮನಿಸುವುದರ ಜತೆಗೆ ವಿಧ್ಯಾರ್ಥಿ ದೆಸೆಯಲ್ಲಿ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಾಲೇಜಿನ ವಿವಿಧ ವೇದಿಕೆಗಳ ಕ್ರಿಯಾಚಟುವಟಿಕೆಗಳಲ್ಲಿ ತಮ್ಮನ್ನು ಸೃಜನಶೀಲವಾಗಿ ತೊಡಗಿಸಿಕೊಂಡು, ವಿಧ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ರೂಢಿಸಿಕೊಂಡು ಸತ್ವಜೆಗಳಾಗಬೇಕೆಂದು ಕೊಲ್ಲೂರು ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅರುಣ್ ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಮಾರ್ಚ್ 05 ರಂದು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು, ವಿವಿಧ ವೇದಿಕೆಗಳ ಪ್ರಧಾನ ಸಂಯೋಜಕರು ಹಾಗೂ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದ್ದರು. ವಾಣಿಜ್ಯ ಉಪನ್ಯಾಸಕಿ ಮಾಲತಿ ವಂದಿಸಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಚೈತ್ರಾ ನಿರೂಪಿಸಿದ್ದರು.