ಕುಂದಾಪುರ (ಮಾ.10): ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ಇದೇ ಮಾರ್ಚ್ 12 ರಂದು ಕರಾವಳಿ ಲೇಖಕಿಯರ – ವಾಚಕಿಯರ ಸಂಘ (ರಿ.) ಮತ್ತು ಶ್ರೀ ಶಾರದಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ “ಮಹಿಳೆ ಮತ್ತು ಪುರಾಣ : ಸೃಜನಾತ್ಮಕತೆ”ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ನಡೆಯಲಿದೆ.

ಖ್ಯಾತ ಲೇಖಕಿ, ಚಿಂತಕಿ ಶ್ರೀಮತಿ ವೈದೇಹಿ ರವರು ಈ ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ. ಕಾಲೇಜಿನ ಸಂಚಾಲಕರಾದ ಶ್ರೀ ಬಿ. ಅಪ್ಪಣ್ಣಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಲತಾ ಅಭಯ್ ಕುಮಾರ್, ಡಾ. ಜ್ಯೋತಿ ಚೇಳಾರು, ಶ್ರೀಮತಿ ಮಂಜುಳಾ ಶೆಟ್ಟಿ, ಡಾ. ಶೈಲಾ ಯು., ಶ್ರೀಮತಿ ಜಾನಕಿ ಬ್ರಹ್ಮಾವರ, ಶ್ರೀಮತಿ ವಿಜಯಲಕ್ಷ್ಮಿ ಭಟ್, ಶ್ರೀಮತಿ ಅನುಪಮಾ ಎಸ್. ಶೆಟ್ಟಿ, ರಾಕೇಶ್ ಜಿ. ಕೆಳಮನೆ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.











