ಕುಂದಾಪುರ, ಮಾ.(10) : ಅತ್ಯಂತ ಕಿರು ಅವಧಿಯಲ್ಲಿ ಕ್ರೀಡೆಯಲ್ಲಿ ಉತ್ಕ್ರಷ್ಟ ಸಾಧನೆ ಮಾಡುವ ಮೂಲಕ ಮಂಗಳೂರು ವಿಶ್ವವಿದ್ಯಾನಿಲಯದ ಗಮನ ಸೆಳೆದ ಸಂಸ್ಥೆ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆಕಾಲೇಜು. ವಿದ್ಯಾರ್ಥಿದೆಸೆಯಲ್ಲಿ ನನ್ನ ಕ್ರೀಡಾಪ್ರತಿಭೆಯನ್ನು ಗುರುತಿಸಿದ ಈ ಸಂಸ್ಥೆಗೆ ನಾನು ಅಭಾರಿಯಾಗಿದ್ದೇನೆ. ಕ್ರೀಡಾಪಟುಗಳು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಶಿಸ್ತು ಮತ್ತು ನಿರಂತರ ಪರಿಶ್ರಮ ಮುಖ್ಯ ಎಂದು ಖಾಸಗಿ ಕಂಪೆನಿ ಉದ್ಯೋಗಿ ಕಾಲೇಜಿನ ಪೂರ್ವ ವಿದ್ಯಾರ್ಥಿ ಮನೀಷ್ ಪೂಜಾರಿ ಹೇಳಿದರು.
ಅವರು ನಗರದ ಗಾಂಧಿ ಮೈದಾನದಲ್ಲಿ ನಡೆದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಮಾರ್ಚ್ 10ರಂದು ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಯಾದ ಶ್ರೀ ಸೀತಾರಾಮ ನಕ್ಕತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ, ವಿಶ್ವಸ್ಥ ಮಂಡಳಿಯ ಸದಸ್ಯರಾದ ಶ್ರೀ ಅರುಣ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಂಜಿತ್ ಟಿ.ಎನ್, ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ಲಕ್ಷ್ಮೀಶ ಮಂಜ, ನಿವೇದಿತಾ ಉಪಸ್ಥಿತರಿದ್ದರು.
ಕಾಲೇಜನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಸಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ಉಪನ್ಯಾಸಕರುಗಳಾದ ಶ್ರೀ ಯೋಗೀಶ್ ಶ್ಯಾನುಭೋಗ್ ವಂದಿಸಿ, ಶ್ರೀಮತಿ ಪ್ರಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.