ಉಡುಪಿ (ಮಾ.14) ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ ಇದರ ಮಾನವಿಕ ಸಂಘ ಆಶ್ರಯದಲ್ಲಿ ಮಾನವ ಹಕ್ಕುಗಳು ಮತ್ತು ಮಹಿಳಾ ಸಬಲೀಕರಣ ಎನ್ನುವ ವಿಷಯದ ಕುರಿತು ವಿಚಾರಗೋಷ್ಠಿಯನ್ನು ಸಂಸ್ಥೆಯ ಕಲಾವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು.
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ಹೆಬ್ಬಾರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಹಳೆವಿದ್ಯಾರ್ಥಿ ಸಂಘದ ಶ್ರೀ ಸಂಜಯ್ ಸಂಜಯ್ ನಾಯಕ್ ಆಗಮಿಸಿದ್ದರು.
ಕಾಲೇಜಿನ ಮಾನವಿಕ ಸಂಘದ ಸಂಯೋಜಕರಾದ ಉಪನ್ಯಾಸಕಿ ಲೋಯಿಲೀಸಾ ಹಾಗೂ ಸಹ ಸಂಯೋಜಕರಾದ ಉಪನ್ಯಾಸಕ ಅನಿಲ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಥಮ ವರ್ಷದ ಕಲಾವಿಭಾಗದ ವಿದ್ಯಾರ್ಥಿಗಳು ವಿಚಾರಗೋಷ್ಠಿಯನ್ನು ನಡೆಸಿಕೊಟ್ಟರು. ದ್ವಿತೀಯ ವರ್ಷದ ಕಲಾ ವಿಭಾಗದ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.