ಉಡುಪಿ (ಮಾ.14) ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ ಇದರ 2020-21 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮಾರ್ಚ್ 10ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಸಂಸ್ಥೆಗಳ ಸಂಚಾಲಕರಾದ ಅತೀ ವಂದನೀಯ ಫಾ.ವೆಲೆರಿಯನ್ ಮೆಂಡೋನ್ಸಾ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬಿ.ಎಸ್.ಎನ್.ಎಲ್ ಉಡುಪಿ ವಲಯದ ನಿರ್ವಹಣಕಾರರಾದ ಎನ್ .ಸಂದೀಪ್ ರವರು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ಹೆಬ್ಬಾರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವ , ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜೈಸನ್ ಹಾಗೂ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಸ್ಥರು ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ವಾಣಿಶ್ರೀ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ಉಪನ್ಯಾಸಕರಾದ ಸುರೇಶ್ ಹೆಗ್ಡೆ ಕಾರ್ಯಕ್ರಮವನ್ನು ನಿರೂಪಿಸಿದರು.















