ಕುಂದಾಪುರ (ಮಾ. 18): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ, ವ್ಯವಹಾರ ನಿರ್ವಹಣೆ ಶಾಸ್ತ್ರ ವಿಭಾಗ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಶಾಸ್ತ್ರ ಸಂಘದ ಆಶ್ರಯದಲ್ಲಿ ‘ಡಿಜಿಟಲ್ ಮಾರ್ಕೆಟಿಂಗ್ ಮಾಹಿತಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಿಜಿಟಲ್ ರಾಯ್ ಅಕಾಡೆಮಿ, ಬೆಂಗಳೂರಿನ ಸಂಸ್ಥಾಪಕರಾದ ಶ್ರೀ ರಾಜೀವ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್ನ ಮಹತ್ವ ಮತ್ತು ಅದರಿಂದ ಮುಂದಿನ ದಿನಗಳಲ್ಲಿ ಸಿಗುವ ಉದ್ಯೋಗಾವಕಾಶಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಾಸುದೇವ ಭಟ್, ವ್ಯವಹಾರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ನಂದಾ ರೈ ಹಾಗೂ ಉಪನ್ಯಾಸಕರುಗಳಾದ ಶ್ರೀ ರಾಜೇಶ್ ಶೆಟ್ಟಿ ಮತ್ತು ಸ್ವಸ್ತಿ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸುಪ್ರೀತಾ ಶೆಟ್ಟಿ ವಂದಿಸಿ, ಆಯಿಷಾ ನಮಿರಾ ಕಾರ್ಯಕ್ರಮವನ್ನು ನಿರ್ವಹಿಸಿದರು.