ಕುಂದಾಪುರ (ಮಾ. 20): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಸಾಂಪ್ರದಾಯಿಕ ಕ್ರೀಡೆಗಳ ಪಂದ್ಯಾಟವನ್ನು ಬ್ರಹ್ಮಾವರದ ಎಸ್. ಎಮ್. ಎಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೆಂಕಟೇಶ್ ಭಟ್ ಮಾರ್ಚ್ 19ರಂದು ಉದ್ಘಾಟಿಸಿದರು.
ವಿದ್ಯುನ್ಮಾನ ಯುಗದ ಭರಾಟೆಯಲ್ಲಿ ಸಾಂಪ್ರದಾಯಿಕ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಮಂಗಳೂರು ವಿಶ್ವವಿದ್ಯಾನಿಲಯ ಗ್ರಾಮೀಣ ಕ್ರೀಡೆಗಳನ್ನು ಪರಿಚಯಿಸುವ ಕೈಂಕರ್ಯದಲ್ಲಿ ತೊಡಗಿರುವುದು ಸ್ತುತ್ಯಾರ್ಹ. ಇಂತಹ ಗ್ರಾಮೀಣ ಕ್ರೀಡೆಗಳು ಪರಿಸರ ಕಾಳಜಿಯನ್ನು ಮೂಡಿಸುವುದರ ಜೊತೆಗೆ ಮಾನವ ಸಂಬಂಧವನ್ನು ವರ್ಧಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಇನ್ಫೋಸಿಸ್ ಕಂಪೆನಿ ಉದ್ಯೋಗಿ ಮತ್ತು ಕಾಲೇಜಿನ ಪೂರ್ವ ವಿದ್ಯಾರ್ಥಿ ಶಿವಪ್ರಸಾದ್ ವಕ್ವಾಡಿ ಹೇಳಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಂಜಿತ್ ಟಿ.ಎನ್, ಕ್ರೀಡಾ ಸಂಘದ ಕಾರ್ಯದರ್ಶಿಯಾದ ಲಕ್ಷ್ಮೀಶ ಮಂಜ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವಿದ್ಯಾರ್ಥಿನಿ ಸುಪ್ರೀತಾ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.