ಉಡುಪಿ (ಮಾ. 21) ಶ್ರೀ ಧವಲಾ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ “ಮೆಂಟರಿಂಗ್ ಸ್ಕಿಲ್ಸ್” ಬಗ್ಗೆ ಶಿಕ್ಷಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ಶ್ರೀ ದಿಗಂಬರ ಜೈನ ವಿದ್ಯಾವರ್ಧಕ ಸಂಘ (ರಿ) ಮೂಡಬಿದ್ರೆ ಇದರ ಸಂಚಾಲಕರಾದ ಶ್ರೀ ಕೆ. ಹೇಮರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿಧ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಹೇಳಿದ್ದರು.ಜೊತೆಗೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುದರ್ಶನ್ ಕುಮಾರ್ರವರು ಇಂದಿನ ಬದಲಾದ ಕಾಲಘಟ್ಟದಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಅಗತ್ಯ ಎಂದು ವಿವರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಣಿಪಾಲ ಕಾಲೇಜಿನ ಮನಃಶಾಸ್ತ್ರ ಪ್ರಾಧ್ಯಾಪಕಿ ಡ್ರಾ, ಕಾವ್ಯಶ್ರೀ ಕೆ.ಬಿ ರವರು ನಡೆಸಿಕೊಟ್ಟ ತರಬೇತಿಯಲ್ಲಿ ಕಾಲೇಜಿನ ಎಲ್ಲ ಶಿಕ್ಷಕರು ಭಾಗವಹಿಸಿದ್ದರು. ಐ.ಕ್ಯೂ.ಎ.ಸಿ. ಸಂಯೋಜಕಿಯಾದ ಡಾ. ಪದ್ಮಜ ಶೆಟ್ಟಿ ಸ್ವಾಗತಿಸಿದರು. ಶ್ರೀ ಪಾರ್ಶನಾಥ ಅಜ್ಜಿ ವಂದಿಸಿದರು. ಡಾ. ರೂಪಾ ಕಾರ್ಯಕ್ರಮ ನಿರೂಪಿಸಿದರು.